ಮುಸ್ಲಿಂ ಸಮಾಜದ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿರುವ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳರನ್ನು ಕೊಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಸೋಮವಾರ ಸಾಯಂಕಾಲ 5ಗಂಟೆ ಸುಮಾರಿಗೆ ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಿಗೆ ಅವರಿಗೆ ಮುಸ್ಲಿಂ ಮಹಿಳೆಯರು ಮನವಿ ಸಲ್ಲಿಸಿದರು. ಮುಸ್ಲಿಂ ಮಹಿಳೆಯರನ್ನು ಮದುವೆಯಾದರೆ 5 ಲಕ್ಷ ರೂಪಾಯಿ ನೀಡುತ್ತೇನೆ ಎಂದು ಶಾಸಕ ಯತ್ನಾಳ್ ಹೇಳಿಕೆ ನೀಡಿದರು. ಹೇಳಿಕೆಯ ಕುರಿತು ಗಾಂಧಿ ಚೌಕ ಪೊಲೀಸ್ ಠಾಣೆಯಲ್ಲಿ ಮುಸ್ಲಿಂ ಮಹಿಳೆಯರು ಪ್ರಕರಣ ದಾಖಲಿಸಿದರು ಸಹ ಇಲ್ಲಿಯವರೆಗೂ ಬಂಧನವಾಗಿಲ್ಲ ಕೂಡಲೇ ಬಂದಿಸಬೇಕು ಎಂದು ಆಗ್ರಹಿಸಿದರು.