ಕೊಪ್ಪಳ ಜಿಲ್ಲೆಯ ಯಲಬುರ್ಗ ತಾಲೂಕಿನ ' ವಡ್ರಕಲ್ ' ಗ್ರಾಮದ ಪಾರ್ವತಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದು ಮನೆಗೆ ಜಿಲ್ಲೆಯ ಭೋವಿ ಸಮಾಜದ ಮುಖಂಡರುಗಳು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವಾನ ಹೇಳಿದ್ದಾರೆ. ಸೆಪ್ಟೆಂಬರ್ 08 ರಂದು ಮಧ್ಯಾಹ್ನ 2-30 ಗಂಟೆಗೆ ಭೇಟಿ ನೀಡಿದ್ದಾರೆ. ಆತ್ಮಹತ್ಯೆಗೆ ಕಾರಣರಾದವರಿಗೆ ತಕ್ಕ ಶಿಕ್ಷೆಯಾಗಬೇಕು ಮತ್ತು ಸರ್ಕಾರ ಆತ್ಮಹತ್ಯೆ ಮಾಡಿಕೊಂಡಿರುವ ಪಾರ್ವತಿಯ ಕುಟುಂಬದವರಿಗೆ ಪರಿಹಾರ ನೀಡಬೇಕು ಎಂದು ಭೋವಿ ಸಮಾಜದ ಮುಖಂಡರು ಸರ್ಕಾರಕ್ಕೆ ಒತ್ತಾಯಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಮುಖಂಡ ಪರುಶುರಾಮ ಅಮರಾವತಿ ಕುಷ್ಟಗಿ, ರಾಮಣ್ಣ ಅಳವಂಡಿ, ಯಲ್ಲಪ್ಪ ನಿಲೋಗಲ್ ರಾಮು ಪೂಜಾರಿ ಉಪಸ್ಥಿತರಿದ್ದರು