ಮಹಾರಾಷ್ಟ್ರದಲ್ಲಿ ಮಳೆ ಮುಂದಯವರೆದ ಪರಿಣಾಮ ಬಾಗಲಕೋಟೆ ಜಿಲ್ಲೆಯ ಕೃಷ್ಣ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ.ಪರಿಣಾಮ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಶ್ರಮಬಿಂದುಸಾಗರದ ಸಮೀಪ ಮನೆಗಳಿಗೆ ನೀರು ನುಗ್ಗಿದೆ. ಶೆಡ್ಡಗಳಿಗೂ ನೀರು ನುಗ್ಗಿದೆ. ಮನೆಯಲ್ಲಿನ ಸರಕು ಸರಂಜಾಮುಗಳು ನೀರಲ್ಲಿ ಆಹುತಿಯಾಗಿವೆ.ಜನರನ್ನ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿದು ಬಂದಿದೆ.