ದಾಂಡೇಲಿ : ತಾಲೂಕು ಆಡಳಿತ ಸೌಧದಲ್ಲಿ ಗುರುವಾರ ಮಧ್ಯಾಹ್ನ 12.30 ಗಂಟೆ ಸುಮಾರಿಗೆ ಶಾಸಕ ಆರ್.ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯ್ತು. ತಹಶೀಲ್ದಾರ್ ಶೈಲೇಶ ಪರಮಾನಂದ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಪಿಂಚಣಿಗೆ ಸಂಬಂಧಪಟ್ಟಂತೆ ಇರುವ ತೊಂದರೆಗಳನ್ನು ಹಾಗೂ ಪಿಂಚಣಿಗೆ ಸಂಬಂಧಿಸಿದಂತೆ ಫಲಾನುಭವಿಗಳಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರವನ್ನು ಕಂಡುಕೊಳ್ಳಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯ್ತು.