ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಟಾನವಾಗುತ್ತಿದ್ದು ಫಲಾನುಭವಿಗಳು ಸೌಲಭ್ಯ ಪಡೆಯಲು ಇರುವ ಅಡೆತಡೆ, ತಾಂತ್ರಿಕ ದೋಷಗಳನ್ನು ಸರಿಪಡಿಸಿ ಸಮರ್ಪಕವಾಗಿ ಅನುಷ್ಠಾನಗೊಳಿಸಲು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ ಬಸವರಾಜ್ ಸೂಚಿಸಿದರು. ದಾವಣಗೆರೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಂಚ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತರಬೇಕಾದರೆ, ಹಲವು ತಾಂತ್ರಿಕ ದೋಷ, ಅಡೆತಡೆ ಸಹಜ. ಅವುಗಳನ್ನು ತ್ವರಿತವಾಗಿ ಸರಿಪಡಿಸಿ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವಂತೆ ಸೂಚಿಸಿದರು.