ಕರ್ನಾಟಕ ರಾಜ್ಯ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಮತ್ತು ಉಡುಪಿ ಜಿಲ್ಲಾ ಅಥ್ಲೆಟಿಕ್ ಅಸೋಸಿಯೇಷನ್ (ರಿ.) ಇವರ ಸಹಯೋಗದಲ್ಲಿ ಕರ್ನಾಟಕ ರಾಜ್ಯ ಕಿರಿಯರ ಮತ್ತು 23ರ ವಯೋಮಿತಿಯ ಕ್ರೀಡಾಕೂಟದ ಸಮಾರೋಪ ಸಮಾರಂಭವು ಇಂದು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಉಡುಪಿ ಇಲ್ಲಿ ನಡೆಯಿತು. ಕ್ರೀಡಾಕೂಟದ ಸಂಘಟನಾ ಸಮಿತಿ ಅಧ್ಯಕ್ಷರು ಹಾಗೂ ಉಡುಪಿಯ ಮಾಜಿ ಶಾಸಕರಾದ ಕೆ. ರಘುಪತಿ ಭಟ್ ರವರು ಕ್ರೀಡಾಕೂಟದಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ, ಕ್ರೀಡಾಕೂಟದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.