ನಗರದಲ್ಲಿ ಶನಿವಾರ ಹಿಂದೂ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆ ನಡೆಯುತ್ತಿರುವ ಸಂದರ್ಭದಲ್ಲಿ ಬಿಜೆಪಿ ಮುಖಂರು ಮೆರವಣಿಗೆಯಲ್ಲಿ ಡಿಜೆಗೆ ಅವಕಾಶ ನೀಡುವಂತೆ ಪ್ರತಿಭಟನೆ ನಡೆಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ನೇತೃತ್ವದಲ್ಲಿ ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಡಿಜೆಗೆ ಅವಕಾಶ ನೀಡುವಂತೆ ಪ್ರತಿಭಟನೆ ನಡೆಸಿದರು. ಈ ವೇಳೆ ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಸುರೇಶ್ ಕುಮಾರ್, ಮುಖಂಡರಾದ ಜಯಪಾಲಯ್ಯ, ರಾಮದಾಸ್ ಸೇರಿದಂತೆ ಮುಂತಾದವರು ಇದ್ದರು.