ಬೆಳಗಾವಿ ಜಿಲ್ಲೆಯಾದ್ಯಂತ ಈಗಾಗಲೇ ಅದ್ದೂರಿಯಾಗಿ ಗಣೇಶ ಚತುರ್ಥಿ ನಡೆಯುತ್ತಿದ್ದು ಆದ್ದರಿಂದ ಈಗ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಗಣೇಶೋತ್ಸವದ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿದ್ದು ಹುಕ್ಕೇರಿ ಪೊಲೀಸ್ ಠಾಣೆಯ ಪೊಲೀಸ ಸಿಬ್ಬಂದಿಗಳಿಂದ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ರ್ಯಾಲಿ ನಡೆಸುವ ಮೂಲಕ, ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ಹಾಗೂ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದು ಬುಧುವಾರ 5 ಗಂಟೆಗೆ ಪೊಲೀಸ ಅಧಿಕಾರಿಗಳ ಸಮ್ಮುಖದಲ್ಲಿ ಪಥಸಂಚಲನ ಮಾಡುವ ಮೂಲಕ ಜಾಗೃತಿ ಮೂಡಿಸಿದರು.