ಚಾಮರಾಜನಗರದಲ್ಲಿ ಗಣೇಶ ಚತುರ್ಥಿ ಹಿನ್ನೆಲೆ ಮಾರುಕಟ್ಟೆಗೆ ಕಳೆ ಬಂದಿದೆ ಎಲ್ಲೂ ನೋಡಿದರು ಗಣೇಶ ಮೂರ್ತಿಗಳ ಹವಾ ಸುರುವಾಗಿದೆ. ಗಣೇಶೋತ್ಸವ ಆಚರಣೆಗೆ ದಿನಗಣನೆ ಶುರುವಾಗಿದ್ದು, ಹಬ್ಬಕ್ಕೆ ಅಗತ್ಯವಿರುವ ಗಣೇಶ ಮೂರ್ತಿಗಳ ಖರೀದಿ ಜೋರಾಗಿದೆ. ಜಿಲ್ಲೆಯಾದ್ಯಂತ ಹಲವು ತಯಾರಕರ ಬಳಿ, ಜನರು ಮೂರ್ತಿಗಳನ್ನು ಕಾಯ್ದಿರಿಸುತ್ತಿದ್ದಾರೆ. ನಗರದ ಅಗ್ರಹಾರ ಬೀದಿ, ದೊಡ್ಡ ಅಂಗಡಿ ಬೀದಿ, ಚಿಕ್ಕ ಅಂಗಡಿ ಬೀದಿ ಹಾಗೂ ರಥದ ಬೀದಿಗಳಲ್ಲಿ ಗಣಪತಿ ಮೂರ್ತಿಗಳನ್ನು ಮಾರಾಟಕ್ಕೆ ಇಡಲಾಗಿದೆ.