ತುಮಕೂರು ನಗರದ ಗ್ರಂಥಾಲಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ 110 ನೇ ಜನ್ಮ ದಿನಾಚರಣೆ ಸಂಭ್ರಮದಿಂದ ನಡೆಯಿತು. ಬುಧವಾರ ಬೆಳಿಗ್ಗೆ 11.30 ರ ಸಮಯದಲ್ಲಿ ನಡೆದ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಬಳಿಕ ಮಾತನಾಡಿ ಡಿ. ದೇವರಾಜ ಅರಸು ಅಧಿಕಾರ ಅವಧಿಯಲ್ಲಿ ಜಾರಿಗೊಳಿಸಿದ ಜನಪ್ರಿಯ ಯೋಜನೆಗಳನ್ನು ಮೆಲುಕು ಹಾಕಿದರು. ತರುವಾಯ ಎಸ್ ಎಸ್ ಎಲ್ ಸಿ ಪರೀಕ್ಷೆ ಸಾಧನೆ ಮಾಡಿದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸಾಧನ ವ್ಯಕ್ತಿಗಳನ್ನ ಸನ್ಮಾನಿಸಿ ಗೌರವಿಸಲಾಯಿತು. ಸಮಾರಂಭದಲ್ಲಿ ಪಾಲಿಕೆ ಆಯುಕ್ತೆ ಬಿ.ವಿ. ಅಶ್ವಿಜ, ಆಡಿಷನ್ ಎಸ್ಪಿ ಗೋಪಾಲ್ ಇದ್ದರು