ಬೀದರ್ : ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ, ಜಮೀನಿನಲ್ಲಿ ನೀರು ನಿಂತು ರೈತರು ಬಿತ್ತನೆ ಮಾಡಿದ ಬೆಳೆಗಳು ಹಾನಿಯಾಗಿದ್ದು, ಸರ್ಕಾರ ಬೆಳೆ ಕಳೆದುಕೊಂಡ ರೈತರಿಗೆ ಎಕರೆಗೆ ಕನಿಷ್ಠ 25 ಸಾವಿರ ರೂ. ಪರಿಹಾರ ಕೂಡಲೇ ನೀಡಬೇಕು ಎಂದು ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಒತ್ತಾಯಿಸಿದ್ದಾರೆ. ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬುಧೇರಾ, ಮಲ್ಲಿಕ್ ಮರ್ಜಾಪೂರ್, ಖಾಶೆಂಪುರ್ ಪಿ ಸೇರಿದಂತೆ ವಿವಿಧ ಗ್ರಾಮಗಳ ರೈತರ ಜಮೀನುಗಳಿಗೆ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಭೇಟಿ ನೀಡಿ ಅವರು ಮಾತನಾಡಿದರು.