ಚನ್ನಪಟ್ಟಣ ನಗರಸಭೆ ಸಭಾಂಗಣದಲ್ಲಿ ಸಾಮಾನ್ಯ ಸಭೆ ಜರುಗಿತು. ಬುಧವಾರ ನಗರಸಭೆ ಅಧ್ಯಕ್ಷ ವಾಸೀಲ್ ಆಲಿ ಖಾನ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದು ಹಲವು ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಯಿತು. ಪ್ರಮುಖವಾಗಿ ವಿದ್ಯುತ್ ಚಿತಗಾರಕ್ಕೆ ಚಾಲನೆ ನೀಡುವ ಬಗ್ಗೆ ಚರ್ಚೆ ನಡೆದು ಸದಸ್ಯರು ಆದಷ್ಟು ಬೇಗ ಚಾಲನೆ ನೀಡಿ ಎಂದು ಒತ್ತಾಯಿಸಿದರು. ಇದಕ್ಕೆ ಉತ್ತರಿಸಿದ ಅಧ್ಯಕ್ಷರು ಮುಂದಿನ ಒಂದು ವಾರದಲ್ಲಿ ಚಾಲನೆ ನೀಡುವ ಭರವಸೆ ನೀಡಿದರು.