ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯ ಯಾಳಗಿ ಗ್ರಾಮದಲ್ಲಿ ಸಾಲ ಬಾಧೆಗೆ ಹೆದರಿ ರೈತನೋರ್ವ ವಿಶೇಷ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. 57 ವರ್ಷದ ರೈತ ಸಿದ್ದಣ್ಣ ಹಡಪದ ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿಯಾಗಿದ್ದಾನೆ. ಸುಮಾರು ಐದು ಲಕ್ಷ ರೂಪಾಯಿ ಎಷ್ಟು ಸಾಲ ಮಾಡಿಕೊಂಡಿದ್ದ, ಅತಿವೃಷ್ಟಿಯಿಂದ ತೊಗರಿ ಬೆಳೆ ಸಂಪೂರ್ಣ ಹಾಳಾಗಿದ್ದರಿಂದ ಮನನೊಂದು ಜಮೀನಿನಲ್ಲಿಯೇ ವಿಷ ಸೇವಿಸಿ ಸಾವನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಶನಿವಾರ ಬೆಳಗ್ಗೆ ಕೆಂಭಾವಿ ಠಾಣೆ ಪೊಲೀಸರು ಭೇಟಿ ನೀಡಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.