ಗ್ರಾಮೀಣ ಪ್ರದೇಶದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಕ್ಕೆ ಬರೆಯುವುದನ್ನು ತಪ್ಪಿಸಲು ಸ್ಥಳೀಯವಾಗಿ ಉದ್ದಿಮೆಗಳು ಹೆಚ್ಚು ಸ್ಥಾಪನೆಯಾಬೇಕು. ಮಹಿಳೆಯರು ತಯಾರಿಸುವ ಅನೇಕ ಉತ್ಪನ್ನಗಳಿಗೆ ಮಾರುಕಟ್ಟೆ ಇರುವುದಿಲ್ಲ. ಅಂತಹ ವಸ್ತುಗಳನ್ನು ಮಾರಾಟ ಮಾಡಲು ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದರೆ ಅನುಕೂಲವಾಗಲಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್ ಅವರು ಹೇಳಿದರು.