ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ಜಗತ್ತಿಗೆ ತೋರಿಸುವ ಸಲುವಾಗಿ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ,ಇದರಿಂದ ಮತ್ತಷ್ಟು ಮಕ್ಕಳು ಇತ್ತೇಜಿತರಾಗಿ ಮುಂದಿನ ವರ್ಷ ಅವರೂ ಸಾಧನೆ ಮಾಡಿ ಪುರಸ್ಕಾರಕ್ಕೆ ಭಾಜನರಾಗಿ ಮುಂದೆ ಸಮಾಜ ನಿರ್ಮಾಣದ ಶಿಲ್ಪಿಗಳಾಗಿ ಹೊರ ಹೊಮ್ಮಲಿ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.ಪಟ್ಟಣದ ಹೊರವಲಯದಲ್ಲಿರುವ ಎಸ್‌ಎನ್.ಸಿಟಿಯಲ್ಲಿ ಸರ್ಕಾರಿ ನೌಕರರ ಸಂಘ,ಸರ್ಕಾರಿ ಮಹಿಳಾ ನೌಕರರ ಸಂಘ ಹಾಗೂ ಕಾಂಗ್ರೆಸ್ ಮುಖಂಡರ ಸಂಯುಕ್ತಾಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಎರಡನೇ ವರ್ಷದ ಸರ್ವೋದಯ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿದ ಅವರು ಪ್ರತಿಯೊಬ್ಬ ಮಗುವಿನಲ್ಲಿಯೂ ಒಂದೊಂದು ಪ್ರತಿಬೆ ಇರುತ್ತದೆ ಎಂದ್ರು