ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮತ್ತೆ ಮಳೆ ಚುರುಕು ಪಡೆದುಕೊಂಡಿದ್ದು ಮಡಿಕೇರಿ ಸೇರಿದಂತೆ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಳೆ ಹೆಚ್ಚಾಗಿದ್ದು ನದಿ ತೋರೆ ಹಳ್ಳ ಕೊಳ್ಳಗಳು ತುಂಬಿ ಹರಿಯುತ್ತಿದೆ. ಕಳೆದ ಹಲವು ದಿನಗಳಿಂದ ಬಿಡುವು ಕೊಟ್ಟಿದ ವರುಣ ಇದೀಗ ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದು ಮಳೆಗೆ ಕೊಡಗಿನ ಜನತೆ ಹಿಡಿಶಾಪ ಹಾಕುತ್ತಿದ್ದಾರೆ ಭಾರತಿಯ ಹವಮಾನ ಇಲಾಖೆಯು ಶುಕ್ರವಾರದವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ