ಶ್ರೀರಂಗಪಟ್ಟಣ : ಜಿಲ್ಲಾಧಿಕಾರಿ ಡಾ : ಕುಮಾರ ಅವರು ಇಂದು ಮಂಡ್ಯ ಜಿಲ್ಲೆಯಲ್ಲಿ ಹಾದುಹೋಗಿರುವ ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (NH-275) ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದರು. ಮಂಗಳವಾರ ಸಾಯಂಕಾಲ 6 ಗಂಟೆ ಸಮಯದಲ್ಲಿ ಶ್ರಿರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಗ್ರಾಮದ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಹೊಂದಿ ಕೊಂಡಿರುವ ಅಪೂರ್ಣವಾದ ಒಳಚರಂಡಿ ಕಾಮಗಾರಿಯ ಪರಿಶೀಲನೆಯನ್ನು ನಡೆಸಿ, ಸದರಿ ಕಾಮಗಾರಿಯನ್ನು ತುರ್ತಾಗಿ ಪೂರ್ಣಗೊಳಿಸುವಂತೆ ಹಾಗೂ ಇದೇ ರೀತಿಯಾಗಿ ಜಿಲ್ಲಾದ್ಯಂತ ಇರುವ ಅಪೂರ್ಣವಾದ ಒಳ ಚರಂಡಿಗಳ ಕಾಮಗಾರಿಗಳನ್ನೂ ಸಹ ತುರ್ತಾಗಿ ಪೂರ್ಣಗೊಳಿಸು ವಂತೆ ಸೂಚಿಸಿದರು.