ಕೊಪ್ಪಳ ಜಿಲ್ಲೆಯ ಕಾರಟಗಿ ಪಟ್ಟಣದಲ್ಲಿ ಕಾರಟಗಿ ತಾಲ್ಲೂಕಾ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ, ನೂತನ ಪತ್ರಿಕಾ ಭವನ ಉದ್ಘಾಟನಾ ಸಮಾರಂಭ ಇಂದು ನಡೆಯಿತು. ಸೆಪ್ಟೆಂಬರ್ 14 ರಂದು ಮಧ್ಯಾಹ್ನ 1-30 ಗಂಟೆಗೆ ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಚಿವ ಶಿವರಾಜ ತಂಗಡಗಿ ರಿಬ್ಬನ್ ಕತ್ತರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಈ ಸಂದರ್ಭದಲ್ಲಿ ಕಾರಟಗಿ ತಾಲ್ಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು