ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯ ಸಂಪೂರ್ಣವಾಗಿ ಭರ್ತಿಯಾಗಿದೆ. 519.60 ಮೀಟರ್ ಎತ್ತರದ ಜಲಾಶಯದಲ್ಲಿ ಸಂಪೂರ್ಣವಾಗಿ ನೀರು ಸಂಗ್ರಹಗೊಂಡಿದೆ. ಹೀಗಾಗಿ ಪ್ರತಿ ವರ್ಷದಂತೆ ಈ ಬಾರಿ ಕೂಡಾ ನಾಡದೊರೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ಸಚಿವ ಶಿವಾನಂದ ಪಾಟೀಲ, ಎಂ ಬಿ ಪಾಟೀಲ ಸೇರಿದಂತೆ ಸಚಿವ ಸಂಪುಟದ ಸದಸ್ಯರು ಶಾಸಕರು, ಬಾಗಲಕೋಟೆ, ವಿಜಯಪುರ ಅವಳಿ ಜಿಲ್ಲೆಯ ಜನಪ್ರತಿನಿಧಿಗಳು ಇರುವರು..