ಗೋದಾಮ ಒಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ₹32ಸಾವಿರ ಮೌಲ್ಯದ ಪಟಾಕಿ ವಶಕ್ಕೆ ತೆಗೆದುಕೊಂಡು ಆರೋಪಿತನನ್ನು ಬಂಧಿಸಿರುವ ಘಟನೆ ಪಟ್ಟಣದ ಟೀಚರ್ಸ್ ಕಾಲೋನಿಯಲ್ಲಿ ಗುರುವಾರ ರಾತ್ರಿ 7:30ಕ್ಕೆ ನಡೆದಿದೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಒಂಟಿ ನೇತೃತ್ವದ ತಂಡ ಆರೋಪಿತನನ್ನು ದಸ್ತಗಿರಿ ಮಾಡಿ ₹32ಸಾವಿರ ಮೌಲ್ಯದ ಪಟಾಕಿ ವಶಕ್ಕೆ ತೆಗೆದುಕೊಳ್ಳಲಾಗಿದೆ. ಸಿಪಿಐ ರಘುವೀರ್ ಸಿಂಗ್ ರಾಠೋಡ ಇದ್ದರು.