ಜಿಲ್ಲೆಯ ಆಲಮಟ್ಟಿ ಜಲಾಶಯದಿಂದ 2 ಲಕ್ಷಕ್ಕೂ ಅಧಿಕ ಪ್ರಮಾಣದ ನೀರು ಹೊರ ಬಿಡಲಾಗಿದೆ. ಹೀಗಾಗಿ ನದಿ ಪಾತ್ರದ ಜನರಲ್ಲಿ ಆತಂಕ ಶುರುವಾಗಿದೆ. ಜಲಾಶಯಕ್ಕೆ 2,10,000 ಕ್ಯೂಸೆಕ್ ನೀರು ಹರಿದು ಬಂದಿದ್ದು ಹೊರ ಹರಿವು 2,65,944 ಕ್ಯೂಸೆಕ್ ನೀರು ಹೊರ ಬಿಡಲಾಗಿದೆ. 519.60 ಮಿಟರ್ ಎತ್ತರದ ಜಲಾಶಯದಲ್ಲಿ 518.08 ಮೀಟರ್ ನಷ್ಟು ನೀರು ಸಂಗ್ರಹವಾಗಿದೆ ಹೀಗಾಗಿ ನದಿಪಾತ್ರದ ಜನರು ಎಚ್ಚರಿಕೆಯಿಂದ ಇರಲು ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ..