ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ರೈತನ ನಗರ ಕ್ಯಾಂಪ್‍ನಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮೇಲ್ಚಾವಣಿಯ ಸಿಮೆಂಟು ಉದುರಿ ಬೀಳುತ್ತಿದ್ದು ಶಾಲೆಯಲ್ಲಿ ಮಕ್ಕಳು ಜೀವ ಭಯದಲ್ಲಿಯೇ ಕುಳಿತು ಕಲಿಯುವಂತಹ ಸ್ಥಿತಿ ಎದುರಾಗಿದೆ. ಮಂಗಳವಾರ ಮಧ್ಯಾನ ಇಂತಹ ದೃಶ್ಯ ಕಂಡು ಬಂದಿದ್ದು ಶಾಲೆಯನ್ನು ದುರಸ್ತಿಗೊಳಿಸಲು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರು ಯಾವುದೇ ಪ್ರಯೋಜನವಾಗಿಲ್ಲ ಎಂದು ಎಸ್ ಡಿ ಎಮ್ ಸಿ ಸದಸ್ಯರು ಹಾಗೂ ಪೋಷಕರು ಬೇಸರ ವ್ಯಕ್ತಪಡಿಸುತ್ತಿದ್ದು ಕೂಡಲೇ ಶಾಲೆಯ ದುರಸ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತಿದ್ದಾರೆ.