ರಾಯಚೂರು ಜಿಲ್ಲೆಯ ಲಿಂಗಸೂಗೂರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಗುರುವಾರ ಮಧ್ಯಾಹ್ನ ಪ್ರೊಫೆಸರ್ ಬಿ ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಮಟ್ಟದ ಸಭೆ ನಡೆಯಿತು. ಸಭೆಯಲ್ಲಿ ಸಂಘಟನೆಯ ರಾಜ್ಯ ಸಂಘಟನಾ ಸಂಚಾಲಕ ಹನುಮಂತಪ್ಪ ಕಾಕರಗಲ್ ಭಾಗವಹಿಸಿ ಸಂಘಟನೆ ಹಾಗೂ ಸಂಘಟನೆಯ ಚಟುವಟಿಕೆಗಳು ಮತ್ತು ಮುಂಬರುವ ದಿನಗಳಲ್ಲಿ ಹಮ್ಮಿಕೊಳ್ಳಬೇಕಾದ ಹೋರಾಟಗಳ ಕುರಿತು ಸುಧೀರ್ಘವಾಗಿ ಮಾತನಾಡಿದರು. ಸವಭೆಯಲ್ಲಿ ಎಲ್ಲ ತಾಲೂಕ ಸಂಚಾಲಕರು,ಸಂಘಟನಾ ಸಂಚಾಲಕರು ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.