ಜೋಯಿಡಾ : ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಕ್ಷೇತ್ರದ ಧರ್ಮಾಧಿಕಾರಿಗಳ ಬಗ್ಗೆ ನನಗೂ ಅಪಾರವಾದ ಗೌರವವಿದೆ. ಅರೋಪ ಬಂದಾಗ ತನಿಖೆ ಮಾಡುವುದು ಸಹಜ. ತನಿಖೆಯಿಂದ ಸತ್ಯ ಹೊರಗೆ ಬರುತ್ತದೆ. ಅದರೆ ಧರ್ಮಸ್ಥಳದ ವಿಚಾರವನ್ನೇ ಮುಖ್ಯವಾಗಿಟ್ಟುಕೊಂಡು ಬಿ.ಜೆ.ಪಿ. ಹಾಗೂ ಜೆ.ಡಿ.ಎಸ್ ರಾಜಕೀಯ ಮಾಡುವುದು ಸರಿಯಾದ ಕ್ರಮವಲ್ಲ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ , ಶಾಸಕ ಆರ್.ವಿ. ದೇಶಪಾಂಡೆ ನುಡಿದರು. ಅವರು ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಗಣೇಶಗುಡಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ ಮಾತನಾಡಿದರು.