ಕಲಬುರಗಿ : ಕಲಬುರಗಿ ನಗರದಲ್ಲಿ 250 ಕ್ಕೂ ಅಧಿಕ ರೌಡಿಗಳ ಮನೆಗಳ ಮೇಲೆ ನಗರ ಪೊಲೀಸರು ಮಿಂಚಿನ ದಾಳಿ ನಡೆಸಿದಂತಹ ಘಟನೆ ಸೆಪ್ಟೆಂಬರ್ 13 ರಂದು ಬೆಳಗ್ಗೆ 7 ಗಂಟೆಗೆ ನಡೆದಿದೆ.. ನಗರ ಪೊಲೀಸ್ ಆಯುಕ್ತ ಡಾ ಶರಣಪ್ಪ ಅವರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.. ಇನ್ನೂ ನಗರ ವ್ಯಾಪ್ತಿಯ 250 ಕ್ಕೂ ಅಧಿಕ ರೌಡಿಗಳ ಉಪಟಳ ಮತ್ತು ಚಲನವಲನ ಮೇಲೆ ನಿಗಾ ಇಡಲು ಖಡಕ್ ಸೂಚನೆ ಬಂದ ಹಿನ್ನಲೆಯಲ್ಲಿ ನಗರ ಎಲ್ಲಾ ಪೊಲೀಸ್ ಠಾಣೆಗಳ ರೌಡಿಗಳ ಮನೆ ಮೇಲೆ ದಾಳಿ ನಡೆಸಿ ಮಾಹಿತಿ ಸಂಗ್ರಹಿಸಿದ್ದಾರೆ.. ಇನ್ನೂ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ..