ಹಾಸನ: ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರ ನಿರ್ದೇಶನದಂತೆ ಆಗಸ್ಟ್ 31 ಭಾನುವಾರದಂದು ಜೆಡಿಎಸ್ ಪಕ್ಷದ ವತಿಯಿಂದ ಧರ್ಮಸ್ಥಳ ಸತ್ಯ ಯಾತ್ರೆಯನ್ನು ಹಮ್ಮಿಕೊಂಡಿರುವದಾಗಿ ಶಾಸಕ ಸ್ವರೂಪ ಪ್ರಕಾಶ್ ತಿಳಿಸಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜಿಲ್ಲೆ ಸೇರಿದಂತೆ ನೆರೆ ಜಿಲ್ಲೆಗಳಿಂದ ಸುಮಾರು 5 ರಿಂದ 6 ಸಾವಿರ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರು ಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ನಗರದ ಹೊರವಲಯದ ಕಂದಲಿ ಗ್ರಾಮದ ಯಗಚಿ ಇನ್ಸಿಟ್ಯೂಟ್ ಆವರಣದಲ್ಲಿ ಎಲ್ಲರಿಗೂ ಉಪಹಾರ ವ್ಯವಸ್ಥೆ ಮಾಡಲಾಗಿದ್ದು ಅಲ್ಲಿಂದ ಪ್ರತ್ಯೇಕ ವಾಹನಗಳಲ್ಲಿ