ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲಾ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯಲ್ಲಿ ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಮಾಧ್ಯಮಗಳ ಜೊತೆ ಮಾತನಡಿದ ಅವರು, “ಪ್ರತಿ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುಧಾರಣೆ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ 500 ಮಂದಿ ಎಂಜಿನಿಯರ್ ಗಳಿಗೆ ಅನುಮೋದನೆ ನೀಡಲಾಗಿದೆ. ಈ ಹಿಂದೆ 198 ವಾರ್ಡ್ ಗಳಿದ್ದವು. ಈಗ 500 ವಾರ್ಡ್ ಗಳ ರಚನೆಯ ಅನುಮತಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.