ಸರ್ಕಾರ ಮತ್ತು ನ್ಯಾಯಾಲಯದ ನಿರ್ದೇಶನದಂತೆ ಗಣಪತಿ ಹಬ್ಬ ಆಚರಣೆ ಮಾಡುವ ಮೂಲಕ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೊಂದಿಗೆ ಸಹಕಾರ ನೀಡಬೇಕು ಎಂದು ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿ ಸುರೇಶ ಬಿ.ಇಟ್ನಾಳ ಹೇಳಿದರು ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಗೌರ ಗಣೇಶ ಹಬ್ಬದ ಪೂರ್ವಭಾವಿ ಶಾಂತಿ ಸಭೆ ಇಂದು ನಡೆಯಿತು. ಆಗಸ್ಟ್ 22ರಂದು ಮಧ್ಯಾಹ್ನ 12-00 ಗಂಟೆಗೆ ನಡೆದ ಸಭೆಯಲ್ಲಿ ಕೊಪ್ಪಳ ಜಿಲ್ಲೆಯ ಪೊಲೀಸ್ ವರಿಷ್ಠ ಅಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ ಅಪರಜಿಲ್ಲಾಧಿಕಾರಿ ಸಿದ್ದರಾಮೇಶ್ವರ ಸಹಾಯಕ ಆಯುಕ್ತ ಮಹೇಶ ಮಾಲಗತ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು