ರಾಯಚೂರ ಜಿಲ್ಲೆಯ ಸಿಂಧನೂರ ಪಟ್ಟಣದಲ್ಲಿ ಗುರುವಾರ ಬೆಳಿಗ್ಗೆ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡ ಸಿಟಿ ರವಿ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ, ಮಧ್ಯದ ಶೀತಲ ಸಮರದಲ್ಲಿ ರಾಜ್ಯದ ಅಭಿವೃದ್ಧಿ ಮರೆತಿದ್ದಾರೆ ಎಂದು ಆರೋಪಿಸಿದರು. ಗಂಡು ಮಕ್ಕಳ ಬಳಿಯಲ್ಲಿನ 10 ಸಾವಿರ ರೂಪಾಯಿ ಕಿತ್ತುಕೊಂಡು ಮನೆಯ ಹೆಣ್ಣುಗಳಿಗೆ 2 ಸಾವಿರ ರೂಪಾಯಿ ಕೊಡುತ್ತಿದ್ದಾರೆ,ಅಗತ್ಯ ವಸ್ತುಗಳ ಬೆಲೆ ಏರಿಸಿ ರಾಜ್ಯದ ಜನರಿಗೆ ತೊಂದರೆ ಉಂಟು ಮಾಡಿದ್ದಾರೆ ಎಂದು ಸರ್ಕಾರದ ವಿರುದ್ಧ ಆರೋಪಿಸಿದರು. ಈ ಸಂದರ್ಭದಲ್ಲಿ ಸಿಂಧನೂರು ಪಟ್ಟಣದ ಬಿಜೆಪಿಯ ಅನೇಕ ಮುಖಂಡರು ಉಪಸ್ಥಿತರಿದ್ದರು.