ಧರ್ಮಸ್ಥಳ ಪ್ರಕರಣದಲ್ಲಿ ಯಾವ ಆಧಾರದ ಮೇಲೆ ನನ್ನ ವಿರುದ್ಧ ಆರೋಪ ಮಾಡಿದ್ದಾರೆ ಎಂದು ಜನಾರ್ಧನ ರೆಡ್ಡಿಯವರು ನ್ಯಾಯಾಲಯದಲ್ಲಿ ಉತ್ತರಿಸಲಿ ಎಂದು ತಮಿಳುನಾಡಿನ ಸಂಸದ ಸಸಿಕಾಂಥ್ ಸೆಂಥಿಲ್ ಅವರು ತಿಳಿಸಿದ್ದಾರೆ.ಗಂಗಾವತಿ ಕ್ಷೇತ್ರದ ಶಾಸಕ ಜನಾರ್ಧನ್ ರೆಡ್ಡಿಯವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಸೆಪ್ಟೆಂಬರ್ 6ರಂದು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಆಗಮಿಸಿದ್ದ ಅವರು ಬೆಳಿಗ್ಗೆ 11 ಗಂಟೆಗೆ ಪ್ರತಿಕ್ರಿಯಿಸಿದರು.ವಕೀಲ ಸೂರ್ಯ ಮುಕುಂದರಾಜ್ ಅವರೊಂದಿಗೆ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಆಗಮಿಸಿದ ಸಸಿಕಾಂತ್ ಸೆಂಥಿಲ್ ಅವರು ಖಾಸಗಿ ದೂರು ಸಲ್ಲಿಕೆ ಮಾಡಿದ್ದು, ಸೆಪ್ಟೆಂಬರ್ 11ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.