ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದಲ್ಲಿ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಕಟ್ಟಡವನ್ನು ಸೋಮವಾರ ಸಾಯಂಕಾಲ 4ಗಂಟೆ ಸುಮಾರಿಗೆ ಜವಳಿ ಮತ್ತು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ರೈತರ ಅಭಿವೃದ್ಧಿಗೆ ಸಹಕಾರ ನೀಡುವಂತಹ ಕೆಲಸ ಮಾಡಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಸಹಕಾರ ಸಂಘದ ಪದಾಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.