ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದೊಳಗೆ ಸಮನ್ವಯತೆ ಕೊರತೆ, ಆಂತರಿಕ ಗುದ್ದಾಟ ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಜೆಡಿಎಸ್ ಸೇವಾದಳ ರಾಜ್ಯಾಧ್ಯಕ್ಷ ಬಸವರಾಜ್ ಪಾದಯಾತ್ರೆ ಹೇಳಿದ್ದಾರೆ. ಬಿಟ್ಟಿ ಭಾಗ್ಯಗಳ ಮೂಲಕ ರಾಜ್ಯವನ್ನು ದಿವಾಳಿ ಮಾಡುವ ಕೆಲಸ ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದು ಅವರು ಆರೋಪಿಸಿದರು. ಕಲ್ಬುರ್ಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿ ಮತ್ತು ಪ್ರವಾಹದಿಂದ ರೈತರು ಭೂಮಿ, ಮನೆ ಹಾನಿಗೆ ಒಳಗಾಗಿದ್ದು, ತಕ್ಷಣ ಪರಿಹಾರ ಧನ ಹಾಗೂ ಬೆಳೆ ವಿಮೆ ಬಿಡುಗಡೆ ಮಾಡುವಂತೆ ಮಂಗಳವಾರ 3 ಗಂಟೆಗೆ ಮಾತನಾಡಿ ಆಗ್ರಹಿಸಿದರು.