ಡಿಕೆ ಶಿವಕುಮಾರ್ RSS ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಸದಾಶಿವನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಡಿಕೆಶಿವಕುಮಾರ್ ಹಾಗೆ ಹೇಳಬಾರದಿತ್ತು ಹೇಳಿದ್ದಾರೆ. RSS ಗೀತೆ ಹೇಳಿದ ಮೇಲೆ ಅವರು ಕ್ಷಮೆ ಕೇಳಿದ್ದಾರೆ ಅಲ್ಲಿಗೆ ಎಲ್ಲವೂ ಮುಗೀತು. ಕ್ಷಮೆ ಕೇಳಿದ ಮೇಲೆ ಮುಗೀತು. ಪದೇ ಪದೇ ಅದನ್ನ ಎತ್ತಿ ಹಿಡಿಯೋದು ಬೇಡ. ಕ್ಲೋಸ್ ಆದ ಕೇಸ್ ಓಪನ್ ಮಾಡೋಕೆ ನಾನು ಹೋಗೊಲ್ಲ. ಮುಂದೆ ಯಾರು ಹೀಗೆ ಮಾಡಬಾರದು ಎಂದರು.