ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷ ಭೀಮನಗೌಡ ಬಿರಾದಾರ ಮೇಲೆ ಗುಂಡಿನ ದಾಳಿ ಮಾಡಿ ಪರಾರಿಯಾಗಿರುವ ಆರೋಪಿಗಳನ್ನು ಬಂಧಿಸಬೇಕು ಎಂದು ಆಗ್ರಹಿಸಿ ಚಡಚಣ ಪಟ್ಟಣದ ಪೊಲೀಸ್ ಠಾಣೆಯ ಮುಂದೆ ಬುಧವಾರ ಸಾಯಂಕಾಲ 4ಗಂಟೆ ಸುಮಾರಿಗೆ ಮೃತ ಭೀಮನಗೌಡ ಬಿರಾದಾರ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಸೇರಿಕೊಂಡು ಪ್ರತಿಭಟನೆ ಮಾಡಿದರು. ಇನ್ನು ಆರೋಪಿಗಳನ್ನು ಪೊಲೀಸರು ಶೀಘ್ರದಲ್ಲಿ ಬಂಧಿಸುವ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆಯನ್ನು ಹಿಂಪಡೆದರು.