ಬೆಳೆ ಹಾನಿ ಪರಿಹಾರ ವಿತರಣೆಯನ್ನು ಸರಳೀಕರಣಗೊಳಿಸಲು ಎನ್ ಡಿಆರ್.ಎಫ್ ಮಾರ್ಗಸೂಚಿಗಳಲ್ಲಿ ಬದಲಾವಣೆಗೆ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವ ಶಿವಾನಂದ ಪಾಟೀಲ ರೈತರಿಗೆ ಭರವಸೆ ನೀಡಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ರೈತರ ಅಹವಾಲುಗಳನ್ನು ಆಲಿಸಿದ ಸಚಿವರು, ಪರಿಹಾರ ವಿತರಣೆಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟನಿರ್ದೇಶನ ನೀಡಿದ್ದಾರೆ. ಪರಿಹಾರ ವಿತರಣೆಗೆ ಹಣದ ಕೊರತೆ ಇಲ್ಲ, ಜಿಲ್ಲಾಧಿ ಕಾರಿಗಳ ಖಾತೆಯಲ್ಲಿ 38 ಕೋಟಿ ರೂ. ಇದೆ. ಜಂಟಿ ಸಮೀಕ್ಷೆ ಪ್ರಗತಿಯಲ್ಲಿದ್ದು, ತ್ವರಿತವಾಗಿ ಪೂರ್ಣಗೊಳಿಸಿ ಪರಿಹಾರ ವಿತರಣೆಗೆ ಕ್ರಮಕೈಗೊಳ್ಳಲಾಗುವುದು ಎಂದರು.