ಬಗರ್ ಹುಕುಂ ಸಾಗುವಳಿದಾರರಿಗೆ ಸಕ್ರಮಗೊಳಿಸುವಂತೆ ಆಗ್ರಹಿಸಿ ಸೆಪ್ಟೆಂಬರ್ 17 ನೇ ತಾರೀಖಿನಂದು ರಾಯಚೂರು ನಗರದ ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಹನುಮಂತಪ್ಪ ಕಾಕರಗಲ್ ಎಚ್ಚರಿಸಿದ್ದಾರೆ. ರಾಯಚೂರು ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಮಧ್ಯಾಹ್ನ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ನಿವೇಶನ ರೈತರಿಗೆ ನಿವೇಶನ ನೀಡಬೇಕು, ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಆಗ್ರಹಿಸಲಾಗುವುದು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಘಟನೆಯ ಅನೇಕ ಮುಖಂಡರು ಕೂಡ ಉಪಸ್ಥಿತರಿದ್ದರು.