ಮಾಲೂರು ಕೈಗಾರಿಕಾ ಪ್ರದೇಶದಲ್ಲಿರುವ ವೆರ್ಗಾ ಅಟಾಚ್‌ಮೆಂಟ್ ಪ್ರೈವೇಟ್ ಲಿಮಿಟೆಡ್ ಕಂಪನಿಯು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ, ನಷ್ಟ ಎಂದು ತೋರಿಸಿ ಅಕ್ರಮವಾಗಿ ಮುಚ್ಚಿರುವುದನ್ನು ವಿರೋಧಿಸಿ, ಕೈಗಾರಿಕೆಯನ್ನು ಮತ್ತೆ ಆರಂಭಿಸಬೇಕೆಂದು ಒತ್ತಾಯಿಸಿ ಈ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ 81 ಖಾಯಂ ನೌಕರರು ಕಳೆದ 10 ದಿನಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿದ್ದು. ಸರ್ಕಾರವು ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆಯನ್ನು ಇತ್ಯರ್ಥ ಮಾಡಬೇಕೆಂದು ಸಿಪಿಐ(ಎಂ) ಪಕ್ಷವು ಸೋಮವಾರ ಒತ್ತಾಯಿಸಿದೆ. ಈ ಕೈಗಾರಿಕೆಯಿಂದ ಬಂದ ಲಾಭದಿಂದ 2018-19 ರಲ್ಲಿ ವೆರ್ಗಾ 2. ವರ್ಗಾ 3 ನೇ ಘಟಕಗಳನ್ನು ಮಾಲೂರು ಕೈಗಾರಿಕಾ ಪ್ರದೇಶದ 2ನೇ ಹಂತದಲ್ಲಿ ಆರಂಭಿಸಿದ್ದರು.