ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ನಡೆಸುವ ಸಮೀಕ್ಷಾ ಕಾರ್ಯವು ಅಚ್ಚುಕಟ್ಟಾಗಿ ನಡೆಯಲಿ ಎಂದು ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರಿಸ್ ಸುಮೈರ್ ಅವರು ಆಶಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಳ್ಳಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ನಗರದ ಜಿಲ್ಲಾ ಪಂಚಾಯತ್ ನಜೀರ್ ಸಾಬ್ ಸಭಾಂಗಣದಲ್ಲಿ ಮಾಸ್ಟರ್ ಟ್ರೇನರ್ ಗಳಿಗೆ ಸೆಪ್ಟಂಬರ್ 12, ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ಏರ್ಪಡಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.