ಯಾದಗಿರಿ ತಾಲೂಕಿನ ರಾಚನಹಳ್ಳಿ ಗ್ರಾಮದಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಕಳಪೆ ಗುಣಮಟ್ಟದ ಆಹಾರ ಸೇವಿಸಿ ಆರು ಜನ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಘಟನೆ ಕುರಿತು ವಸತಿ ಶಾಲೆಯಲ್ಲಿನ ವಿದ್ಯಾರ್ಥಿನಿಯರು ಮಂಗಳವಾರ ಬೆಳಗ್ಗೆ ಪ್ರತಿಭಟನೆಗೆ ಮುಂದಾಗಿ ಹಾಸ್ಟೆಲ್ ವಾರ್ಡನ್ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ ಯ.ಇದರಿಂದಾಗಿ ಆಹಾರ ಸರಿಯಾಗಿ ನೀಡುತ್ತಿಲ್ಲ ಎಂದು ವಾರ್ಡನ್ ವಿರುದ್ಧ ಅಮಾನತುಗೊಳಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.