ಮೊಳಕಾಲ್ಮುರು:- ಹಿಂದುಗಳ ಧಾರ್ಮಿಕ ಶ್ರದ್ದಾ ಕೇಂದ್ರವಾದ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿ ಹಿಂದುಗಳ ಭಾವನೆಗೆ ಧಕ್ಕೆ ತರುವ ಕೆಲಸ ನಡೆಯುತ್ತಿದ್ದೂ ಈ ಷಡ್ಯಂತ್ರದ ಹಿಂದಿರುವವರನ್ನು ಪತ್ತೆಹಚ್ಚಿ ಇವರಿಗೆ ತಕ್ಕ ಶಿಕ್ಷೆ ಕೊಡದ ನಡೆ ರಾಜ್ಯ ಸರ್ಕಾರದ ನಡೆ ಖಂಡಿಸಿ ಬಿಜೆಪಿ ಮಂಡಲದಿಂದ ಸೋಮವಾರ ಮಧ್ಯಾಹ್ನ 12:35ಕ್ಕೆ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯು ಪಟ್ಟಣದ ಖಾಸಗಿ ಬಸ್ ನಿಲ್ದಾಣದಿಂದ ಕಾಲ್ನಡಿಗೆ ಮುಖಾಂತರ ಆರಂಭಗೊಂಡು ತಾಲೂಕು ಕಚೇರಿ ಆವರಣದಲ್ಲಿ ಸಮಾವೇಶಗೊಂಡಿತು.