ಹೊಸಳ್ಳಿ ಕ್ರಾಸ್ ಗೆ ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ ಭೇಟಿ ಮೂಲಭೂತ ಸೌಕರ್ಯ ಪರಿಶೀಲನೆ ಯಾದಗಿರಿ ನಗರದ ಹೊಸಳ್ಳಿ ಕ್ರಾಸ್ ಗೆ ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ ಭೇಟಿ ನೀಡಿ ಮೂಲಭೂತ ಸೌಕರ್ಯ ಪರಿಶೀಲನೆ ನಡೆಸಿದ್ದಾರೆ ಸ್ಥಳೀಯ ಸಾರ್ವಜನಿಕರಿಂದ ಮಾಹಿತಿಯನ್ನು ಪಡೆದುಕೊಂಡರು ಹೊಸಳ್ಳಿ ಕ್ರಾಸ್ ನಲ್ಲಿರುವ ರಸ್ತೆ ಸರಿಪಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಗರಸಭೆ ಅಧ್ಯಕ್ಷ ಸೂಚಿಸಿದರು ನಂತರ ವಾರ್ಡಿನ ಸಾರ್ವಜನಿಕರಿಂದ ಮೂಲಭೂತ ಸೌಕರ್ಯಗಳ ಕುರಿತು ಮಾಹಿತಿ ಪಡೆದುಕೊಂಡರು. ವಾರ್ಡಿನಲ್ಲಿ ಏನಾದರೂ ಸಮಸ್ಯೆಯಾದರೂ ಕೂಡಲೇ ನನ್ನ ಗಮನಕ್ಕೆ ತರುವಂತೆ ಸಾರ್ವಜನಿಕರಿಗೆ ತಿಳಿಸಿದರು ಸಂದರ್ಭದಲ್ಲಿ ನಗರಸಭೆ ಅಧಿಕಾರಿಗಳು ಭಾಗವಹಿಸಿದ್ದರು