ಮನೆಯಲ್ಲಿ ನೇಣು ಬಿಗಿದುಕೊಳ್ಳಲು ಪ್ರಯತ್ನ ಪಟ್ಟು ನಂತರ ವಿಷ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೀರ್ಥಹಳ್ಳಿ ತಾಲ್ಲೂಕಿನ ಬೆಟ್ಟಮಕ್ಕಿಯಲ್ಲಿ ನಡೆದಿದೆ. ಬುಧವಾರ ಬೆಟ್ಟಮಕ್ಕಿಯ ನಿವಾಸದಲ್ಲಿ ವಿಖ್ಯಾತ್ ( 38 ) ಆತ್ಮಹತ್ಯೆ ಮಾಡಿಕೊಂಡ ಯುವಕ. ಬೆಂಗಳೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಇತ್ತೀಚಿಗೆ ಮನೆಗೆ ಬಂದಿದ್ದ. ಈತನ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮೃತದೇಹವನ್ನು ಜಯಚಾಮರಾಜೇಂದ್ರ ಆಸ್ಪತ್ರೆಗೆ ರವಾನಿಸಲಾಗಿದ್ದು ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ.