ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ ಸಂಭವಿಸಿದ್ದು, ಕೆಎಸ್ಸಾರ್ಟಿಸಿ ಬಸ್ಸೊಂದರ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಾಟಿಯ ಎರಡನೇ ತಿರುವಿನ ಬಳಿ ಈ ಅಪಘಾತ ಸಂಭವಿಸಿದೆ. ಕೊಟ್ಟಿಗೆಹಾರ ಕಡೆ ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿಯು ಉಜಿರೆ ಕಡೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯ ಹಿಂಬದಿಯಲ್ಲಿ ಬರುತ್ತಿದ್ದ ಇನ್ನೊಂದು ಲಾರಿ ಗ್ಯಾಸ್ ಸಿಲಿಂಡರ್ ಕೊಂಡೊಯ್ಯುತ್ತಿದ್ದ ಲಾರಿಗೆ ಢಿಕ್ಕಿಯಾಗಿದೆ.ಘಟನೆಯಲ್ಲಿ ಕೆಎಸ್ಸಾರ್ಟಿಸಿ ಬಸ್ ಚಾಲಕ ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.