ಸರಕಾರ ಬಿಡುಗಡೆ ಮಾಡಿದ ಅನುದಾನವನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಹಾಪೌರ ಜ್ಯೋತಿ ಪಾಟೀಲ್ ತಿಳಿಸಿದರು. ಧಾರವಾಡ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನುದಾನದ ವಿಷಯದಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ ಎಂದು ಇದೇ ಸಂದರ್ಭದಲ್ಲಿ ಹೇಳಿದರು.