ಚೌಡೇಶ್ವರಿ ಕಲ್ಯಾಣ ಮಂಟಪದಲ್ಲಿ, ಜಿಲ್ಲಾ ಪಂಚಾಯತ್ ಬೆಂಗಳೂರು ದಕ್ಷಿಣ ಜಿಲ್ಲೆ, ತಾಲೂಕು ಪಂಚಾಯಿತಿ ಚನ್ನಪಟ್ಟಣ ಹಾಗೂ ಶಾಲಾ ಶಿಕ್ಷಣ ಇಲಾಖೆ ಚನ್ನಪಟ್ಟಣ ತಾಲೂಕು ಇವರ ವತಿಯಿಂದ ಬುಧವಾರ ಆಯೋಜಿಸಲಾದ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಸದರಾದ ಡಾ.ಸಿ.ಎನ್.ಮಂಜುನಾಥ್ ಭಾಗಿಯಾಗಿದ್ದರು.ಈ ವೇಳೆ ಮಾತನಾಡಿ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಅಪಾರ ಸೇವೆ ಹಾಗೂ ತ್ಯಾಗವನ್ನು ಸ್ಮರಿಸಬೇಕಾಗಿದೆ ಎಂದರು.