ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಉತ್ತಮ ಕಲಿಕಾ ವಾತಾವರಣ ನಿರ್ಮಿಸುವಂತಹ ಕೊಠಡಿಗಳ ವ್ಯವಸ್ಥೆ ಮಾಡಲು ಸರ್ಕಾರಕ್ಕೆ ಸಲಹೆಯನ್ನು ಆಯೋಗ ನೀಡಲಿದೆ.ಯಾವುದೇ ಕಾರಣಕ್ಕೂ ಸುರಕ್ಷಿತವಲ್ಲದ ಶಾಲಾ ಕೊಠಡಿಗಳಲ್ಲಿ ಪಾಠ ಪ್ರವಚನಗಳನ್ನು ನಡೆಸಬಾರದು ಎಂದು ಶಿಕ್ಷಣ ಇಲಾಖೆಗೆ ತಿಳಿಸಲಾಗಿದೆ. ಒಟ್ಟಾರೆ ಮಕ್ಕಳ ಮಾನಸಿಕ, ಬೌದ್ಧಿಕ ಬೆಳವಣಿಗೆಯ ಜೊತೆಗೆ ರಕ್ಷಣಾತ್ಮಕ ವಾತಾವರಣವನ್ನು ರಾಜ್ಯದಲ್ಲಿ ನಿರ್ಮಿಸಲು ಆಯೋಗ ಕಾರ್ಯೋನ್ಮುಕವಾಗಿದೆ ಎಂದು ತಿಳಿಸಿದರು. ಪೊಲೀಸ್ ಇಲಾಖೆಯಿಂದ ಪ್ರತಿ ಗುರುವಾರ ತೆರೆದ ಮನೆ ಕಾರ್ಯಕ್ರಮವನ್ನು ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಆಯೋಜಿಸಿ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಅರಿವು ಮೂಡಿಸಬೇಕು,