ತಾಲೂಕಿನ ಮಾರಲದಿನ್ನಿ ತಾಂಡಾದ ಜ್ಯೋತಿ ಎಂಬಾಕೆಯು ತನ್ನ ವಾಸದ ಮನೆಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿಯನ್ನು ಸಂಗ್ರಹಿಸಿ ಇಟ್ಟಿರುವುದಾಗಿ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ 2 ಲೀ. ಕಳ್ಳಭಟ್ಟಿ ಸಾರಾಯಿ ಮತ್ತು 10 ಲೀ. ಬೆಲ್ಲದ ಕೊಳೆಯನ್ನು ಅಬಕಾರಿ ಇಲಾಖೆ ಲಿಂಗಸ್ಗೂರು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಆಗಸ್ಟ್ 26 ಮಂಗಳವಾರ ಮಧ್ಯಾಹ್ನ ಮೂಡಲದಿನ್ನಿ ಕ್ರಾಸ್ ನಲ್ಲಿ ಕಚೇರಿಯ ಸಿಬ್ಬಂದಿ ಹಾಗೂ ಗೃಹ ರಕ್ಷಕ ದಳದ ಸಿಬ್ಬಂದಿಯೊಂದಿಗೆ ಕೂಡಿಕೊಂಡು ಗಸ್ತು ಮಾಡುತ್ತಿರುವ ಸಮಯದಲ್ಲಿ ವಾಸದ ಮನೆಯಲ್ಲಿ ಅಕ್ರಮವಾಗಿ ಕಳ್ಳಭಟ್ಟಿ ಸಾರಾಯಿಯನ್ನು ಸಂಗ್ರಹಿಸಿ ಇಟ್ಟಿರುವುದಾಗಿ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. ಆರೋಪಿತಳು ದಾಳಿ ಸಮಯದಲ್ಲಿ ಪರ