ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಕಳ್ಳತನದ ಅಪರಾಧದಲ್ಲಿ ವಶಕ್ಕೆ ಪಡೆದಿದ್ದ ವ್ಯಕ್ತಿ ಆತ್ಮಹತ್ಯೆ ಪ್ರಕರಣ ಇದೀಗ ಸಿಒಡಿಗೆ ವರ್ಗಾವಣೆಯಾಗಿದ್ದು, ಈ ಪ್ರಕರಣದಲ್ಲಿ ಠಾಣೆಯ ಎಎಸ್‌ಐ ಸೇರಿ ನಾಲ್ವರನ್ನು ಅಮಾನತ್ತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಶ್ರೀನಿವಾಸ್ ಗೌಡ ಅವರು ಶನಿವಾರ ಆದೇಶ ಮಾಡಿದ್ದಾರೆ. ಬುಧವಾರ ಮುಂಜಾನೆ ಎಂ.ಕೆ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಮದ್ದೂರು ತಾಲೂಕಿನ ದುಂಡನಹಳ್ಳಿಯ ರಮೇಶ್ ಅವರನ್ನು ಕಳ್ಳತನದ ಪ್ರಕರಣದಲ್ಲಿ ಬಂಧಿಸಿ ಠಾಣೆಯಲ್ಲಿ ವಿಚಾರಣೆಗೆಂದು ಇಟ್ಟುಕೊಂಡಿದ್ದ ಸಂದರ್ಭದಲ್ಲಿ ಠಾಣೆಯ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ.