ಶಾಸಕಿ ರೂಪಕಲಾ ಶಶಿಧರ್ ಮಾತನಾಡಿ, ಎಪಿಎಂಸಿ ಯಾರ್ಡ್ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರಥಮ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಇರುವಂತೆ ಎಪಿಎಂಸಿ ಮಾರುಕಟ್ಟೆ ನಿರ್ಮಾಣವಾಗಲಿದೆ. ಆದ್ದರಿಂದ ಸರಕಾರ ಪ್ರಥಮ ಬಾರಿ ಖಾಸಗಿ ಸಹಭಾಗಿತ್ವದಲ್ಲಿಎಪಿಎಂಸಿ ಯಾರ್ಡ್ ಪ್ರಾರಂಭಕ್ಕೆ ನಿರ್ಧಾರ ಕೈಗೊಂಡಿದೆ. ಈಗ ಪ್ರಾರಂಭವಾಗಿರುವ ಎಪಿಎಂಸಿ ಮಾರುಕಟ್ಟೆ ಮೂರು ರಾಜ್ಯಗಳ ಗಡಿ ಭಾಗದಲ್ಲಿದ್ದು, ಸರಕಾರ ಖಾಸಗಿಯವರ ಸಹಭಾಗಿತ್ವದಲ್ಲಿಮಾರುಕಟ್ಟೆ ಅಭಿವೃದ್ಧಿ ಪಡಿಸಲಿದೆ ಎಂದು ಹೇಳಿದರು.