ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟು ಮಾಡುವ ಷಡ್ಯಂತ್ರ್ಯದ ಹಿಂದೆ ರಾಷ್ಟ್ರವಿರೋಧಿಗಳ ಕೈವಾಡವಿದ್ದು ಎನ್ ಐಎಗೆ ಈ ಪ್ರಕರಣವನ್ನು ವಹಿಸಬೇಕೆಂದು ಬಿಜೆಪಿ ಮುಖಂಡ ಬಾಲಸುಬ್ರಹ್ಮಣ್ಯ ಆಗ್ರಹಿಸಿದರು. ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಿಂದೂ ಧರ್ಮದ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸಲು ಷಡ್ಯಂತ್ರ ಮಾಡಿ ಅಪಪ್ರಚಾರ ಎಸಗಿದ್ದು ಇದರ ಹಿಂದಿರುವ ಕಾಣದ ಕೈಗಳ ಬಗ್ಗೆ ಪತ್ತೆ ಹಚ್ಚಲು ರಾಷ್ಟ್ರೀಯ ತನಿಖಾ ಸಂಸ್ಥೆಗೆ ಇದರ ತನಿಖೆ ವಹಿಸಬೇಕೆಂದು ಒತ್ತಾಯಿಸಿದರು.